ಬೆಂಗಳೂರು: ಪಾಕಿಸ್ತಾನ ದಾಳಿಯಿಂದ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಚ್ಎಎಲ್ ನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಓವರ್ ಟೈಮ್ ಕೆಲಸಕ್ಕೆ ಸಿದ್ಧವಾಗಿರುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದ್ದು, HAL ನ ಎಲ್ಲಾ ಸಿಬ್ಬಂದಿಯ ರಜೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದೆ. ಫೈಟರ್ ಫ್ಲೈಟ್ ಗಳ ನಿರ್ವಹಣೆ ಹಿನ್ನಲೆ ಕಡ್ಡಾಯವಾಗಿ ಹಾಜರಿರುವಂತೆ ಎಲ್ಲಾ ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ಸೂಚಿಸಲಾಗಿದೆ.