ಬೆಂಗಳೂರು: ಹಿಂದುಳಿದ ವರ್ಗದ ಸರ್ಕಾರಿ ನೌಕರರಿಗೆ ಕೆನೆಪದರ ಮಿತಿ ವಿನಾಯಿತಿ ನೀಡಲು ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ
ಸರ್ಕಾರಿ ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ ಮತ್ತು ಪ್ರವರ್ಗ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಕೆನೆಪದರ ಮಿತಿಗೆ ವಿನಾಯಿತಿ ನೀಡಲು ನಮೂನೆ- ಹೆಚ್ ಪ್ರಕಾರ ಕ್ರಮ ವಹಿಸುವಂತೆ ತಹಶೀಲ್ದಾರ್ ಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಸರ್ಕಾರಿ ಸೇವೆಯಲ್ಲಿರುವ ನೌಕರರು ಕೆನೆಪದರ ಮಿತಿಗೆ ವಿನಾಯಿತಿ ನೀಡಲು ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ನಮೂನೆ-ಹೆಚ್ ರಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ದೃಢೀಕರಿಸಿ ಪ್ರಮಾಣ ಪತ್ರ ನೀಡುವಂತೆ ತಿಳಿಸಲಾಗಿದೆ.