ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ಸೈನಿಕರು ರೌಂಡ್ಸ್ ಹಾಕುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸಲು ಕೋರುತ್ತೇವೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯನ್ನು ಹೆಚ್ಚಿಸಿದ ಕಾರಣ ಈ ಸೂಚನೆಯನ್ನು ನೀಡಲಾಗಿದೆ. ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸುತ್ತೇವೆ ಎಂದು ತಿಳಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸಲು ಕೋರುತ್ತೇವೆ.
— ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (@blrairport_kn) May 9, 2025
ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯನ್ನು ಹೆಚ್ಚಿಸಿದ ಕಾರಣ ಈ ಸೂಚನೆಯನ್ನು ನೀಡಲಾಗಿದೆ.
ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ… pic.twitter.com/QsXrsxf98v