ಬಳ್ಳಾರಿ : ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮೇ 10 ರಿಂದ 12 ರ ವರೆಗೆ ಬೆಳಿಗ್ಗೆ 10 ರಿಂದ 12 ಮತ್ತು ಮಧ್ಯಾಹ್ನ 02 ರಿಂದ 04 ಗಂಟೆಯವರೆಗೆ ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ 2024 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಆವರಣವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ. ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
You Might Also Like
TAGGED:‘KPSC’ ಪರೀಕ್ಷೆ