HomeUncategorizedBREAKING NEWS: ಹೆಚ್ಚಿದ ಭಾರತ-ಪಾಕಿಸ್ತಾನ ಸಂಘರ್ಷ: ಮೂರೂ ಸಶಸ್ತ್ರ ಪಡೆ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ತುರ್ತು...

BREAKING NEWS: ಹೆಚ್ಚಿದ ಭಾರತ-ಪಾಕಿಸ್ತಾನ ಸಂಘರ್ಷ: ಮೂರೂ ಸಶಸ್ತ್ರ ಪಡೆ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ತುರ್ತು ಸಭೆ

ನವದೆಹಲಿ: ಭಾರತ-ಪಾಕಿಸ್ತಾನ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದ್ದಾರೆ.

ಪಾಕಿಸ್ತಾನದ ಡ್ರೋನ್ ದಾಳಿಯನ್ನು ಭಾರತ ಯಶಸ್ವಿಯಾಗಿ ವಿಫಲಗೊಳಿಸಿದ ಒಂದು ದಿನದ ನಂತರ, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಭದ್ರತಾ ಪರಿಶೀಲನಾ ಸಭೆ ನಡೆಸಿದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಹಾಜರಿದ್ದರು.

ಇದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಇಂದು ಸಶಸ್ತ್ರ ಪಡೆಗಳ ಮಾಜಿ ಯೋಧರ ಗುಂಪನ್ನು ಭೇಟಿಯಾದರು. ಪ್ರಸ್ತುತ ಪರಿಸ್ಥಿತಿಯ ಕುರಿತು ವಿವಿಧ ವಿಷಯಗಳ ಕುರಿತು ಪ್ರಧಾನಿ ಮಾಜಿ ಯೋಧರೊಂದಿಗೆ ವ್ಯಾಪಕ ಸಂವಾದ ನಡೆಸಿದರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಲ್ಲಿ ಮಾಜಿ ವಾಯುಪಡೆ ಮುಖ್ಯಸ್ಥರು, ಸೇನಾ ಮುಖ್ಯಸ್ಥರು, ನೌಕಾಪಡೆಯ ಮುಖ್ಯಸ್ಥರು ಮತ್ತು ದೇಶಕ್ಕೆ ವ್ಯಾಪಕವಾಗಿ ಸೇವೆ ಸಲ್ಲಿಸಿದ ಇತರ ಮಾಜಿ ಯೋಧರು ಭಾಗವಹಿಸಿ ಸಲಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular