HomeLive Newsರೈತರಿಗೆ ಗುಡ್ ನ್ಯೂಸ್: 1500-1600 ರೂ. ದರದಲ್ಲಿ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

ರೈತರಿಗೆ ಗುಡ್ ನ್ಯೂಸ್: 1500-1600 ರೂ. ದರದಲ್ಲಿ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ

ಹಾಸನ: ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಇಂದಿನಿಂದ ಪ್ರಾರಂಭವಾಗಿದ್ದು, ಈಗಾಗಲೇ ಬಿತ್ತನೆ ಬೀಜಕ್ಕೆ 1500-1600 ರೂ. ದರ ನಿಗದಿಪಡಿಸಲಾಗಿದೆ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಬಾರಿ ಒಳ್ಳೆಯ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರು ಉತ್ತಮ ಬೆಳೆ ಬೆಳೆದು ಅಭಿವೃದ್ಧಿ ಹೊಂದಲಿ ಹಾಗೂ ಮಾರಾಟಗಾರರಿಗೂ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು.

ಬಿತ್ತನೆ ಬೀಜವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಇಲಾಖೆ ಗಮನಕ್ಕೆ ತರುವಂತೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ಬಿತ್ತನೆ ಬೀಜ ಖರೀದಿಸಿದ ನಂತರ ಬಿತ್ತನೆಗೆ ಮುನ್ನ ಅನುಸರಿಸಬೇಕಾದ ಕ್ರಮಗಳನ್ನು ಕುರಿತು ರೈತರಿಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಗಳಾ, ತಹಸೀಲ್ದಾರ್ ಗೀತಾ, ಆಲೂಗಡ್ಡೆ ವರ್ತಕರಾದ ಗೋಪಾಲ್, ದೇವರಾಜ್, ಕೂಗಿಗೌಡ ಮತ್ತಿತರರು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular