HomeLatest Newsಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮೇ 15ರಿಂದ ವರ್ಗಾವಣೆಗೆ ಸಂಪುಟ ಗ್ರೀನ್ ಸಿಗ್ನಲ್

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮೇ 15ರಿಂದ ವರ್ಗಾವಣೆಗೆ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮೇ 15 ರಿಂದ ಒಂದು ತಿಂಗಳ ಕಾಲ ಕೈಗೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ವರ್ಗಾವಣೆ ಪ್ರಕ್ರಿಯೆ ನಡೆಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮೇ 15ರಿಂದ ಜೂನ್ 14ರ ವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ಎ ಮತ್ತು ಗ್ರೂಪ್ ಬಿ  ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಅಧಿಕಾರ ನೀಡಲಾಗಿದೆ. ಗ್ರೂಪ್ ಸಿ ಮತ್ತು ಡಿ ವೃಂದದವರಿಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಅಧಿಕಾರ ವಹಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ಗಾವಣೆಯ ಅವಧಿ ವಿಸ್ತರಣೆ, ಮಾರ್ಗಸೂಚಿ ಪರಿಷ್ಕರಣೆ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಂಪುಟ ಸಭೆ ನಿರ್ಣಯಿಸಿದೆ. ಶಿಕ್ಷಣ, ಆರೋಗ್ಯ ಇತರೆ ಇಲಾಖೆಗಳಲ್ಲಿ ಇರುವಂತೆ ಇದೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular