ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಾಕಿಸ್ತಾನ ಸೇನೆ ಭಾರತದ ವಿವಿಧ ನಗರಗಳಲ್ಲಿ ನಿರಂತರ ಶೆಲ್ ದಾಳಿ ನಡೆಸುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದೆ.
ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಎರಡು ಪ್ರಮುಖ ಸ್ಥಳಗಳಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಇಸ್ಲಾಮಾಬಾದ್ ಹಾಗೂ ಕರಾಚಿಯಲ್ಲಿ ಇಂದು ಬೆಳಿಗ್ಗೆ ಪ್ರಬಲ ಸ್ಫೋಟ ಸಂಭವಿಸಿದ್ದು, ಇಸ್ಲಾಮಾಬಾದ್ ನಲ್ಲಿ ಎಲ್ಲಾ ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಇಸ್ಲಾಮಾಬಾದ್ ನಲ್ಲಿ ಎಲ್ಲ ಪೆಟ್ರೋಲ್ ಬಂಕ್ ಗಳು ಬಂದ್ ಇರಲಿವೆ ಎಂದು ತಿಳಿದುಬಂದಿದೆ.’