ನವದೆಹಲಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನಿ ಸ್ಥಿತಿ ಮುಂದುವರೆದಿದ್ದು, ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಭಾರತದ 32 ಏರ್ ಪೋರ್ಟ್ ಗಳನ್ನು ಬಂದ್ ಮಾಡಲಾಗಿದೆ.
ಜಮ್ಮು-ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 32 ವಿಮಾನ ನಿಲ್ದಾಣಗಳು ಬಂದ್ ಆಗಿದ್ದು, ವಿಮಾನ ಹಾರಾಟ ಸಂಪೂರ್ಣ ಸ್ಥಗಿತಗೊಂಡಿದೆ.
ಮೇ14ರವರೆಗೆ ದೇಶದ 32 ಏರ್ ಪೋರ್ಟ್ ಗಳು ಬಂದ್ ಇರಲಿವೆ ಎಂದು ತಿಳಿದುಬಂದಿದೆ. ಇದೇ ವೇಳೆ ಕೇದಾರನಾಥ ಧಾಮ್ ಗೂ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಲಾಗಿದೆ.