ಡೆಹ್ರಾಡೂನ್: ಭಾರತ-ಪಾಕಿಸ್ತಾನದ ನಡುವೆ ಯುದ್ಧಮಯ ವಾತಾವಾರಣ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ಸೇವೆ ಕೂಡ ಸ್ಥಗಿತಗೊಂಡಿದೆ.
ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾರ್ ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ಚಾರ್ ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಸದ್ಯ ಯಾತ್ರಿಕರನ್ನು ಸ್ಥಳಾಂತರಿಸಲು ಮಾತ್ರ ಹೆಲಿಕಾಪ್ಟರ್ ಸೇವೆ ಬಳಸಿಕೊಳ್ಳಲಾಗುತ್ತಿದೆ. ಇಂದು ಬೆಳಿಗ್ಗೆಯಷ್ಟೇ ಉತ್ತರಾಖಂಡದ ಕೆದಾರನಾಥ ಧಾಮ್ ಗೆ ಹೆಲಿಕಾಪ್ಟರ್ ಸೇವೆ ಬಂದ್ ಮಾಡಿ ಆದೇಶ ಹೊರಡಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಚಾರ್ ಧಾಮ್ ಯಾತ್ರೆಗೂ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಂಡಿದೆ.