HomeKarnatakaBIG NEWS: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಸಾವು

BIG NEWS: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಸಾವು

ವಿಜಯಪುರ: ಮನೆಯ ಮುಂದೆ ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ಪಟ್ಟಣದಲ್ಲಿ ನಡೆದಿದೆ.

ಮೂರು ವರ್ಷದ ಹರ್ಷಿತ್ ಮೃತ ಬಾಲಕ. ನಿನ್ನೆಯಿಂದ ಮಗು ಮನೆಯಿಂದ ನಾಪತ್ತೆಯಾಗಿತ್ತು. ಪೋಷಕರು ಕಂಗಾಲಾಗಿ ಹುಡುಕಾಟ ನಡೆಸಿದರೂ ಮಗುವಿನ ಸುಳಿವಿರಲಿಲ್ಲ. ಇಂದು ಅನುಮಾನಗೊಂಡು ಬಾವಿಯಲ್ಲಿ ಪರಿಶೀಲನೆ ನಡೆಸಿದಾಗ ಮಗು ಶವವಾಗಿ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆರೆದ ಬಾವಿ ಇದಾಗಿದ್ದು, ಬಾವಿ ಆಸುಪಾಸಿನಲ್ಲಿ ಮಗು ಆಟವಾಡಲು ಹೋಗಿ ಬಾವಿಗೆ ಬಿದ್ದು ಸಾವನ್ನಪ್ಪಿದೆ. ಮುದ್ದೆಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular