ನವದೆಹಲಿ: ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ನಡೆಸುತ್ತಿದ್ದು, ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ವಾತಾವಾಣ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಹಾಗೂ ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರ ಜೊತೆ ಸಭೆ ನಡೆದಿದೆ.
ಪಾಕಿಸ್ತಾನ ಸೇನೆಯಿಂದ ಭಾರತದ 26 ಸ್ಥಳಗ ಮೇಲೆ ಡ್ರೋನ್ ದಾಳಿ ಹಾಗೂ ಪ್ರತಿಯಾಗಿ ಭಾರತೀಯ ಸೇನೆಯಿಂದ ಪಾಕಿಸ್ತಾನದ ನಾಲ್ಕು ವಾಯುನೆಲೆ ಧ್ವಂಸ ಹಾಗೂ ಭಾರತ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಹಾಗೂ ಭಾರತದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ.