BIG NEWS: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಕರಾವಳಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಗಸ್ತು ಹೆಚ್ಚಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗಳಿಗೆ ಕೆಲ ಖಡಕ್ ಸೂಚನೆ ಗಳನ್ನು ನೀಡಿದರು.

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಿದರು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು. ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಇತರೆ ಸೂಚನೆಗಳು:

  • ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ.
  • ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
  • ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.
  • ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲಾ DC , SP ಗಳು ಕ್ರಮ ವಹಿಸಬೇಕು.
  • ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು.
  • ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು.
  • ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು.
  • ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read