ಬೆಂಗಳೂರು: ಕೆಲವು ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಕಡಿಮೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ಇತ್ತೀಚೆಗಷ್ಟೇ ಉನ್ನತ ಶಿಕ್ಷಣ ಇಲಾಖೆ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 7.5 ರಷ್ಟು ಹೆಚ್ಚಳ ಮಾಡಿತ್ತು, ಇದರ ಬೆನ್ನಲ್ಲೇ ಬೇಡಿಕೆ ಇಲ್ಲದ ಕೋರ್ಸ್ ಗಳಿಗೆ ಮರು ಜೀವ ನೀಡಲು ಮುಂದಾಗಿದೆ. ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿರುವ ಸಿವಿಲ್ ಮತ್ತು ಮೆಕಾನಿಕಲ್ ಸೇರಿದಂತೆ ಕೆಲವು ಕೋರ್ಸ್ ಗಳಿಗೆ ಶುಲ್ಕ ರಿಯಾಯಿತಿ ನೀಡಲು ಚಿಂತನೆ ನಡೆಸಿದೆ.
ಇದು ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯದಲ್ಲಿ 16 ಸರ್ಕಾರಿ, 8 ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿವೆ. 107 ಸರ್ಕಾರಿ ಪಾಲಿಟೆಕ್ನಿಕ್, 43 ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಿದ್ದು, ಈ ಕಾಲೇಜುಗಳಲ್ಲಿ ಶುಲ್ಕದಲ್ಲಿ ರಿಯಾಯಿತಿ ನೀಡಲು ಉದ್ದೇಶಿಸಲಾಗಿದೆ.
ವಿದ್ಯಾರ್ಥಿಗಳನ್ನು ಆಕರ್ಷಿಸಲು ಹಾಲಿ ನಿಗದಿಪಡಿಸಿರುವ 48 ಸಾವಿರ ರೂ. ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.