HomeLatest NewsBREAKING: ಕಾಶ್ಮೀರ ಕೃಷಿ ವಿವಿಯಲ್ಲಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ವಾಪಸ್: ಸುರಕ್ಷಿತರಾಗಿ ಬರಲು HDK ವ್ಯವಸ್ಥೆ

BREAKING: ಕಾಶ್ಮೀರ ಕೃಷಿ ವಿವಿಯಲ್ಲಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ವಾಪಸ್: ಸುರಕ್ಷಿತರಾಗಿ ಬರಲು HDK ವ್ಯವಸ್ಥೆ

ನವದೆಹಲಿ: ಕಾಶ್ಮೀರ ಕೃಷಿ ವಿವಿಯಲ್ಲಿ ಓದುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ವಾಪಸ್ ಬಂದಿದ್ದಾರೆ. ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ನಡುವೆ ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದ ರಾಜ್ಯದ 13 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.

ಕರ್ನಾಟಕ ಮೂಲದ ಒಟ್ಟು 13 ವಿದ್ಯಾರ್ಥಿಗಳು ದೆಹಲಿಗೆ ವಾಪಸ್ ಬಂದಿದ್ದಾರೆ. ವಿದ್ಯಾರ್ಥಿಗಳು ಕ್ಷೇಮವಾಗಿ ಬರಲು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ವ್ಯವಸ್ಥೆ ಮಾಡಿದ್ದಾರೆ. ಶ್ರೀನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ದೆಹಲಿಯ ಕರ್ನಾಟಕ ಭವನ -2ರಲ್ಲಿ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ತಡರಾತ್ರಿ ರೈಲಿನ ಮೂಲಕ ವಿದ್ಯಾರ್ಥಿಗಳು ದೆಹಲಿಗೆ ತಲುಪಿದ್ದಾರೆ. ಇಂದು ದೆಹಲಿಯಿಂದ ತಾಯ್ನಾಡಿಗೆ ವಾಪಸ್ಸಾಗಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular