HomeLatest NewsBIG NEWS: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಓರ್ವ ಸ್ಥಳದಲ್ಲೇ ಸಾವು; ನಾಲ್ವರ...

BIG NEWS: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಓರ್ವ ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪಾಂಡುಪುರದ ಬಳಿ ನಡೆದಿದೆ.

ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಬ್ಬಾಳ ಮೂಲದ ಮೋಹನ್ ಮೃತ ದುರ್ದೈವಿ. ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ತೆರಳುತ್ತಿದ್ದರು. ಈ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜಾಗಿದೆ. ಘಟನಾ ಸ್ಥಳಕ್ಕೆ ಅಕ್ಕೂರು ಠಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular