ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ.) ಕೋರ್ಸ್ ಕಲಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಮಾಸಿಕ 2 500 ರೂಪಾಯಿ ಶಿಷ್ಯವೇತನ ನೀಡಲಾಗುವುದು. ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿ ಪಾಸ್ ಆಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಜೂನ್ 15ರೊಳಗೆ ಸಲ್ಲಿಸಬೇಕು ವಿವರಗಳಿಗಾಗಿ ಮೊ. 94491 62822 ಸಂಪರ್ಕಿಸುವುದು. ವೆಬ್ ಸೈಟ್ https://khtigadag.ac.in/AdmissionForm.pdf ಡೌನ್ಲೋಡ್ ಮಾಡಿಕೊಳ್ಳಬಹುದು.