ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಗವ್ವ ಜೀರಗಿವಾಡ, ಕಲಾವತಿ ಜೀರಗಿವಾಡ ಮೃತಪಟ್ಟವರು ಎಂದು ಹೇಳಲಾಗಿದೆ. ಶನಿವಾರ ಜಮೀನಿನಲ್ಲಿ ಮೇವು ತೆಗೆದುಕೊಂಡು ಮನೆಗೆ ಮರಳುವಾಗ ಸಿಡಿಲು ಬಡಿದು ಇಬ್ಬರೂ ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.