HomeLatest NewsBIG UPDATE: ತಡರಾತ್ರಿ ಛತ್ತೀಸ್‌ ಗಢದಲ್ಲಿ ಭೀಕರ ಅಪಘಾತ: ಮಹಿಳೆಯರು, ಮಕ್ಕಳು ಸೇರಿ 13 ಜನ...

BIG UPDATE: ತಡರಾತ್ರಿ ಛತ್ತೀಸ್‌ ಗಢದಲ್ಲಿ ಭೀಕರ ಅಪಘಾತ: ಮಹಿಳೆಯರು, ಮಕ್ಕಳು ಸೇರಿ 13 ಜನ ಸಾವು

ರಾಯ್ ಪುರ: ಛತ್ತೀಸ್‌ಗಢದ ರಾಯ್‌ಪುರದಲ್ಲಿ ಟ್ರೇಲರ್ ಟ್ರಕ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸಾವನ್ನಪ್ಪಿದ್ದಾರೆ.

ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಚೌಥಿಯಾ ಛಟ್ಟಿಯಿಂದ ಟ್ರಕ್ ಒಂದು ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ಸಾಗಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಟ್ರಕ್ ಖರೋರಾ ಪೊಲೀಸ್ ಠಾಣೆ ಪ್ರದೇಶದ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಜಿಲ್ಲಾಡಳಿತ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ 13 ಜನ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular