‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ನಟಿ ರಕ್ಷಿತಾ ಪ್ರೇಮ್ ಕಂಬನಿ ಮಿಡಿದಿದ್ದಾರೆ.
ಮಿಸ್ ಯು ಮಗನೇ, ನಾನು ಇನ್ಯಾವತ್ತು ನಿನ್ನ ಜೊತೆ ಮಾತನಾಡಲು ಆಗುವುದಿಲ್ಲ. ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿಯಾಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯದಲ್ಲಿ ನೆಲೆಸಿರುತ್ತೀರಿ ಎಂದು ರಕ್ಷಿತಾ ಪ್ರೇಮ್ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಇನ್ನು ರಾಕೇಶನ ಜೊತೆ ಮಾತನಾಡಲು ಸಾಧ್ಯವೇ ಇಲ್ಲ .. ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ಕಾರ್ಯಕ್ರಮ, ರಾಕೇಶ ಯಾವಾಗಲೂ ಉಳಿದವರಿಗಿಂತ ಪ್ರತ್ಯೇಕವಾಗಿ ನಿಲ್ಲುವ ಒಬ್ಬ ವ್ಯಕ್ತಿ. ಎಂತಹ ಪ್ರತಿಭಾವಂತ ಅತ್ಯಂತ ಪರಿಪೂರ್ಣ ವ್ಯಕ್ತಿ. ರಾಕೇಶ ನೀವು ಯಾವಾಗಲೂ ನಮ್ಮ ಹೃದಯದಲ್ಲಿ ನಗುತ್ತಾ ಇರುತ್ತೀರಿ ಎಂದು ತಿಳಿಸಿದ್ದಾರೆ.

