ರಾಮನಗರ: ತಾಂಡಾ, ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಾಗಿರುವ ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಮನಗರದಲ್ಲಿ ಭಾನುವಾರ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯುವ ಪರ್ವ ಸಮಾವೇಶದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ತಾಂಡಾ, ಹಟ್ಟಿ, ಹಾಡಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಾಗಿರುವ ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ವಿಜಯನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದ್ದು, ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಒಂದು ಲಕ್ಷ ಕುಟುಂಬಗಳಿಗೆ ಪಟ್ಟಾ ಖಾತೆ ವಿತರಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.