ಬೆಂಗಳೂರು : ವ್ಯಕ್ತಿಯೋರ್ವ ಪಿಸ್ತೂಲ್ ಹಿಡಿದು ಪಬ್ ಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿಯೋರ್ವ ರಾಜಾಜಿನಗರದಲ್ಲಿರುವ ಜಾಮಿಟ್ರಿ ಪಬ್ ಗೆ ಬಂದಿದ್ದಾನೆ. ಸ್ಥಳದಲ್ಲಿ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ ನಲ್ಲಿ ಆತ ಅವಿತುಕೊಂಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈತ ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಪಬ್