10 ವರ್ಷದ ಬಾಲಕನನ್ನು ಕೊಲೆಗೈದು ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಘಟನೆ ಗುವಹಟಿಯಲ್ಲಿ ನಡೆದಿದೆ.
ತನ್ನ ಮಗ ಟ್ಯೂನ್ ಕ್ಲಾಸಿಗೆ ಹೋದವನು ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಳು. ನಾಪತ್ತೆ ಪ್ರಾರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆಯ ಪ್ರಿಯಕರನೇ ಬಾಲಕ್ನನ್ನು ಹತ್ಯೆಗೈದು ಪೊದೆಯೊಂದರ ಬಳಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿರುವುದು ಪತ್ತೆಯಾಗಿದೆ.
ಪತಿಯಿಂದ ದೂರವಾಗಿದ್ದ ಮಹಿಳೆ ಜಿತುಮೋನಿ ಹಲೋಯ್ ಎಂಬಾತನ ಜೊತೆ ಸಂಬಂಧ ಹೊಂದಿದ್ದಳು. ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ ಬಾಲಕನ ಹತ್ಯೆ ಬಗ್ಗೆ ಬಾಯ್ಬಿಟ್ಟಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.