4 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ

ರಾಯಚೂರು: ನಾಲ್ಕು ವರ್ಷದ ಬಾಲಕಿ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಮೇಲೆ 25 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಗೆ 5 ರೂಪಾಯಿ ಹಣ ಕೊಟ್ಟು ಪುಸಲಾಯಿಸಿ ಪೈಶಾಚಿಕ ಕೃತ್ಯವೆಸಗಿದ್ದಾನೆ.

ಮರುದಿನ ಬಾಲಕಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read