HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರ ಸೇವಾ ವಿವರಗಳನ್ನು 'HRMS' ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರದಿಂದ...

BIG NEWS : ‘ರಾಜ್ಯ ಸರ್ಕಾರಿ’ ನೌಕರರ ಸೇವಾ ವಿವರಗಳನ್ನು ‘HRMS’ ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ದಾಖಲಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ಆದೇಶದಲ್ಲಿ 1ನೇ ಏಪ್ರಿಲ್ 2021 ರ ನಂತರ ರಾಜ್ಯ ಸರ್ಕಾರದ ಸೇವೆಗೆ ನೇಮಕಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು ಹೆಚ್ ಆರ್ ಎಂ ಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (Electronic Service Register – ESR) ನಲ್ಲಿಯೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ.

ಉಲ್ಲೇಖ 2ರ ತಾಂತ್ರಿಕ ಸಮಿತಿ ಸಭೆಯ ನಡವಳಿಯಲ್ಲಿ ಏಪ್ರಿಲ್ 2021 ರ ಪೂರ್ವದಲ್ಲಿ ನೇಮಕಗೊಂಡಿರುವ ಎಲ್ಲಾ ಅಧಿಕಾರಿ ನೌಕರರ ಸೇವಾ ವಿವರಗಳನ್ನು ವಿದ್ಯುನ್ಮಾನ ಸೇವಾ ವಹಿಯಲ್ಲಿ ದಾಖಲಿಸುವ ನಿರ್ದೇಶನ ನೀಡಲಾಗಿತ್ತು.
ಉಲ್ಲೇಖ 3 ರಲ್ಲಿ ಹೆಚ್ ಆರ್ ಎಂ ಎಸ್-1 ತಂತ್ರಾಂಶದಲ್ಲಿನ ಸೇವಾ ವಹಿ ಭಾಗದಲ್ಲಿ ದಾಖಲಾಗಿರುವ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಿವರಗಳ ಮಾಹಿತಿಗಳನ್ನು ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಹಿಸಲು ಕ್ರಮ ಕೈಗೊಳ್ಳಲು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಹಾಗೂ ಇನ್ನು ಮುಂದೆ ನೇಮಕಗೊಳ್ಳುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಿವರಗಳನ್ನು ಹೆಚ್ ಆರ್ ಎಂ ಎಸ್ -2.0 ತಂತ್ರಾಂಶದ ವಿದ್ಯುನ್ಮಾನ ಸೇವಾ ವಹಿ ಯಲ್ಲಿಯೇ ದಾಖಲಿಸಿ ನಿರ್ವಹಿಸಲು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular