JOB ALERT : ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ. ನವರು 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿ ಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಯು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿಯನ್ನು ವಿಸ್ತರಿಸಲಾಗುವುದು. ವೇತನ 25000-59060 (ವಾರ್ಷಿಕ ಬಡ್ತಿ 3%) ಮತ್ತು ಬಿಎಂಆರ್‌ಸಿಎಲ್‌ನ ಓ&ಎಂ ವಿಂಗ್‌ಗೆ ಲಭ್ಯವಿರುವ ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಸಕ್ತರು ಮೇ 22 ರೊಳಗಾಗಿ ಇಲಾಖೆಯ ವೆಬ್‌ಸೈಟ್ www.bmrc.co.in/careers ರಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ helpdesk@bmrc.co.in ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read