ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.
ಉಗ್ರ ಪೋಷಿತ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್ ಸಂದೇಶ ರವಾನಿಸುವ ಸಾಧ್ಯತೆ ಇದೆ. ಇಂದು ರಾತ್ರಿ ಪ್ರಧಾನಿ ಮೋದಿ ಮಾಡಲಿರುವ ಭಾಷಣದ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ.