ನವದೆಹಲಿ: ರಾಜಸ್ಥಾನದ ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂಗೆ ಬಾಂಬ್ ಬೆದರಿಕೆ ಹಾಕಲಾಗಿರುವ ಘಟನೆ ನಡೆದಿದೆ.
ಸ್ಫೋರ್ಟ್ಸ್ ಕೌನ್ಸಿಲ್ ಆಫೀಸ್ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ.
ಸ್ಟೇಡಿಯಂಗೆ ಪೊಲಿಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಗಿದೆ ಎಂದು ಎಸ್ ಪಿ ಲಲಿತ್ ಶರ್ಮಾ ತಿಳಿಸಿದ್ದಾರೆ.