HomeLatest NewsBREAKING: MSIL ಅಧ್ಯಕ್ಷ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು ಅಕಾಲಿಕ ನಿಧನ: ಸಚಿವ ಎಂ.ಬಿ. ಪಾಟೀಲ್ ಸಂತಾಪ

BREAKING: MSIL ಅಧ್ಯಕ್ಷ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು ಅಕಾಲಿಕ ನಿಧನ: ಸಚಿವ ಎಂ.ಬಿ. ಪಾಟೀಲ್ ಸಂತಾಪ

ಚಾಮರಾಜನಗರ: ಚಾಮರಾಜನಗರದ ಕ್ಷೇತ್ರದ ಶಾಸಕ ಹಾಗೂ MSILನ ಅಧ್ಯಕ್ಷ ಪುಟ್ಟರಂಗ ಶೆಟ್ಟಿ ಅವರ ಹಿರಿಯ ಪುತ್ರ ಚಾಮರಾಜು ಅಕಾಲಿಕ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಯಳಂದೂರು ತಾಲೂಕು ವ್ಯವಸಾಯ ಉತ್ಪನ್ನ ಮಾರಾಟಗಾರರ ಸಹಕಾರ ಸಂಘದ ನಿರ್ದೇಶಕರಾಗಿದ್ದ ಚಾಮರಾಜು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಯಳಂದೂರು ತಾಲೂಕಿನ ಉಪ್ಪಿನ ಮೂಳೆ ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಪುಟ್ಟರಂಗ ಶೆಟ್ಟಿ ಅವರ ಪುತ್ರ ಚಾಮರಾಜು ಅವರ ಅಕಾಲಿಕ ನಿಧನಕ್ಕೆ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜು ನಿಧನದ ಸುದ್ದಿ ತಿಳಿದು ಹೃದಯ ಭಾರವಾಗುತ್ತಿದೆ. ಚಾಮರಾಜು ಅವರು ವಿನಯಶೀಲ, ಸಹಾನುಭೂತಿಯುಳ್ಳ ವ್ಯಕ್ತಿತ್ವ ಹೊಂದಿದ್ದರು. ಸಮಾಜ ಸೇವೆಯತ್ತ ಅವರ ಆಸಕ್ತಿ ಮತ್ತು ಜನರಿಗಾಗಿ ಸದಾ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದ್ದವರಾಗಿ ಗುರುತಿಸಿಕೊಂಡಿದ್ದರು. ಈ ದುಃಖದ ಸಮಯದಲ್ಲಿ ಆತ್ಮೀಯರಾದ ಪುಟ್ಟರಂಗ ಶೆಟ್ಟಿ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular