HomeLatest Newsನದಿಯಲ್ಲಿ ಈಜಲು ಹೋದಾಗಲೇ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

ನದಿಯಲ್ಲಿ ಈಜಲು ಹೋದಾಗಲೇ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಯಾದರಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಸಮೀಪ ನಡೆದಿದೆ.

ಶಕೀಲ್(18), ಮೆಹಬೂಬ್(20) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಬೇಸಿಗೆ ದಿನವಾಗಿದ್ದರಿಂದ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular