HomeLatest NewsBREAKING: ವಿನಾಶಕಾರಿ ಪರಮಾಣು ಯುದ್ಧಕ್ಕೆ ರೆಡಿಯಾಗಿದ್ದ ಭಾರತ –ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್...

BREAKING: ವಿನಾಶಕಾರಿ ಪರಮಾಣು ಯುದ್ಧಕ್ಕೆ ರೆಡಿಯಾಗಿದ್ದ ಭಾರತ –ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್ ಮಾಹಿತಿ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೂ ಮುನ್ನ ಪರಮಾಣು ಯುದ್ಧದ ಅಂಚಿನಲ್ಲಿದ್ದವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಎರಡು ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಕದನ ವಿರಾಮ ಒಪ್ಪಂದಕ್ಕೆ ಬರುವ ಮೊದಲೇ ಭಾರತ ಮತ್ತು ಪಾಕಿಸ್ತಾನ ಪರಮಾಣು ಯುದ್ಧದ ಅಂಚಿನಲ್ಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.

ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, ದಕ್ಷಿಣ ಏಷ್ಯಾದ ಎರಡು ನೆರೆಹೊರೆಯವರು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒಪ್ಪದಿದ್ದರೆ, ಲಕ್ಷಾಂತರ ಜೀವಗಳನ್ನು ಬಲಿ ಪಡೆಯಬಹುದಾದ ವಿನಾಶಕಾರಿ ಪರಮಾಣು ಯುದ್ಧಕ್ಕೆ ಜಗತ್ತು ಸಾಕ್ಷಿಯಾಗಬಹುದಿತ್ತು ಎಂದು ಪ್ರತಿಪಾದಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಮತ್ತು ಪಾಕಿಸ್ತಾನದ ಜೊತೆಗೆ ಕದನ ವಿರಾಮದ ಬಗ್ಗೆ ಮಾತನಾಡಿದ ಅವರು ಉಭಯ ದೇಶಗಳ ನಡುವಿನ ಸಂಘರ್ಷ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ನಾವು ಭಾರತ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಸಂಘರ್ಷವನ್ನು ತಡೆದಿದ್ದೇವೆ. ಉಭಯ ದೇಶಗಳು ಕದನ ವಿರಾಮ ಘೋಷಿಸಿದರೆ ಮಾತ್ರ ವ್ಯಾಪಾರ ಮಾಡುತ್ತೇವೆ ಎಂದು ಹೇಳಿದ್ದೆ. ನನ್ನ ಪ್ರಕಾರ ಈ ಕದನ ವಿರಾಮ ಶಾಶ್ವತವಾಗಿರುತ್ತದೆ ಅನಿಸುತ್ತದೆ. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಪರಮಾಣು ಹೊಂದಿವೆ. ಉಭಯ ದೇಶಗಳಿಗೆ ಸಂಘರ್ಷ ನಿಲ್ಲಿಸುವಂತೆ ಸಲಹೆ ನೀಡಿದ್ದೆ ಎಂದು ಟ್ರಂಪ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular