HomeLatest NewsBIG NEWS : 2025-26 ನೇ ಸಾಲಿನ 'ರಾಜ್ಯ ಸರ್ಕಾರಿ' ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

BIG NEWS : 2025-26 ನೇ ಸಾಲಿನ ‘ರಾಜ್ಯ ಸರ್ಕಾರಿ’ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

  1. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-
    (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ,
    (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ನಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
    (3) “ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
    ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.
    (4) ‘ಗುಂಪು-‘ಎ’, ‘ಬಿ’, ‘ಸಿ’, ಮತ್ತು ‘ಡಿ’ ವೃಂದದ ಹುದ್ದೆಗಳು ಎಂದರೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಗುಂಪು-ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ಹುದ್ದೆಗಳು ಮತ್ತು ಕ್ರಮವಾಗಿ ಅಧಿಕಾರ ಹೊಂದಿರುವ ನೇಮಕಾತಿ ಪ್ರಾಧಿಕಾರದ ವ್ಯಾಪ್ತಿ:
  2. ವರ್ಗಾವಣಾ ಪ್ರಕ್ರಿಯೆ:-
    ವರ್ಗಾವಣೆ/ಚಲನವಲನಗಳನ್ನು ಸಕ್ಷಮ ಪ್ರಾಧಿಕಾರವು ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ಮಾಡಬೇಕು.
  3. ವರ್ಗಾವಣೆಯ ಬಗ್ಗೆ ನಿರ್ಬಂಧಗಳು :
    ಪ್ರಸಕ್ತ 2025-26ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆಯು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿನಾಂಕ:15.05.2025 ರಿಂದ ದಿನಾಂಕ:14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು, ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
  4. ಸಕ್ಷಮ ಪ್ರಾಧಿಕಾರದ ಹಾಗೂ ನೌಕರನ ಜವಾಬ್ದಾರಿಗಳು:-
    ಸಕ್ಷಮ ಪ್ರಾಧಿಕಾರವು ವರ್ಗಾವಣೆ / ಚಲನವಲನ ಮಾಡುವಾಗ ಈ ಕೆಳಗಿನ ಅಂಶಗಳನ್ನೂ ಸಹ ಖಚಿತಪಡಿಸಿಕೊಳ್ಳತಕ್ಕದ್ದು.
    (1) ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ನೀಡತಕ್ಕದ್ದು. ಈ ರೀತಿ ಹಲವಾರು ಸರ್ಕಾರಿ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯುವುದರಿಂದ ಸರ್ಕಾರಕ್ಕೆ ಅನವಶ್ಯಕ ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.
    (2) ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳ ಬಗ್ಗೆ, ಆತನ ವಿರುದ್ಧ ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಲಾಗಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಥವಾ ಆತನನ್ನು ಅಭಿಯೋಜನೆಗೊಳಿಸಲು ಉದ್ದೇಶಿಸಲಾಗಿದ್ದಲ್ಲಿ ಅಂತಹವರಿಗೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ (Administrative exigency) (Non-Executive) ಹುದ್ದೆಗಳಿಗೆ ನೇಮಿಸತಕ್ಕದ್ದು ಮುಂದುವರೆದು, ಇಲಾಖಾ ವಿಚಾರಣೆ /ಕ್ರಿಮಿನಲ್ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular