ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್’ಗೆ ಅರ್ಜಿ ಆಹ್ವಾನ

ಧಾರವಾಡ : 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಒಟ್ಟು 39 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು https://khtigadag.ac.in/AdmissionForm.pdf ಆನಲೈನ್‍ನಲ್ಲಿ ಡೌನಲೊಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಜೂನ್ 15, 2025 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 08372-297221, 9449162822 ಮತ್ತು 0836-2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read