ಅಮೃತಸರ: ಸೋಮವಾರ ತಡರಾತ್ರಿ ಪಂಜಾಬ್ನ ಅಮೃತಸರ ಜಿಲ್ಲೆಯ ಮಜಿತಾ ಬ್ಲಾಕ್ನ ವ್ಯಾಪ್ತಿಯ ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿದ ನಂತರ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಗಂಭೀರ ಸ್ಥಿತಿಯಲ್ಲಿರುವ 13 ಕ್ಕೂ ಹೆಚ್ಚು ಜನರನ್ನು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಪೊಲೀಸರು ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದು, ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್(SHO) ಅವತಾರ್ ಸಿಂಗ್, ಹೆಚ್ಚಿನ ಸಾವುಗಳು ಭಂಗಲಿ, ತಂಗ್ರಾ, ಸಂಘ ಮತ್ತು ಮರಾರಿ ಕಲಾನ್ ಗ್ರಾಮಗಳಲ್ಲಿ ಸಂಭವಿಸಿವೆ. ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.
ಅಮೃತಸರ ಉಪ ಆಯುಕ್ತ ಸಾಕ್ಷಿ ಸಾಹ್ನಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡುತ್ತಿದ್ದಾರೆ ಮತ್ತು ಪರಿಹಾರ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ವಿಷಪೂರಿತ ಮದ್ಯದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.