BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ‘FIR’ ರದ್ದು ಕೋರಿ ‘ಹೈಕೋರ್ಟ್’ ಗೆ ಗಾಯಕ ಸೋನು ನಿಗಮ್ ಅರ್ಜಿ

ಡಿಜಿಟಲ್ ಡೆಸ್ಕ್ : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಇದೀಗ ಎಫ್ ಐ ಆರ್ ರದ್ದು ಕೋರಿ ಹೈಕೋರ್ಟ್ ಗೆ ಸೋನು ನಿಗಮ್ ಅರ್ಜಿ ಸಲ್ಲಿಸಿದ್ದಾರೆ.

ದೂರುದಾರ ಹಾಗೂ ಆವಲಹಳ್ಳಿ ಪೊಲೀಸರಿಗೆ ನೋಟಿಸ್ ಹೊರಡಿಸಿದ ಕೋರ್ಟ್ ವಿಚಾರಣೆ ಮೇ 15 ಕ್ಕೆ ಮುಂದೂಡಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಂಗೀತ ಕಾರ್ಯಕ್ರಮದಲ್ಲಿ ನೀಡಿದ ತಮ್ಮ ಹೇಳಿಕೆ ಬಗ್ಗೆ ವಿವಾದಕ್ಕೆ ಕಾರಣವಾಗುತ್ತಲೇ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಕರ್ನಾಟಕದ ಜನರಿಗೆ ಸಾರ್ವಜನಿಕ ಕ್ಷಮೆಯಾಚಿಸಿದ್ದರು.

“ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲಿನ ನನ್ನ ಪ್ರೀತಿ ನನ್ನ ಅಹಂಕಾರಕ್ಕಿಂತ ದೊಡ್ಡದು. ನಿನ್ನ ಮೇಲೆ ಯಾವಾಗಲೂ ಪ್ರೀತಿ” ಎಂದು ಸೋನು ನಿಗಮ್ ತಿಳಿಸಿದ್ದಾರೆ.ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಈ ಪೋಸ್ಟ್ ಬಂದಿತ್ತು..

ಏಪ್ರಿಲ್ 25 ರಂದು ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಅವರಿಗೆ ಕನ್ನಡ ಹಾಡುಗಳನ್ನು ಹಾಡುವಂತೆ ಒತ್ತಾಯಿಸಿದ್ದರು. ಅದಕ್ಕೆ ಸೋನು ನಿಗಮ್ ಸಿಟ್ಟಾಗಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ನಾಗರಿಕರು ಪ್ರಾಣ ಕಳೆದುಕೊಂಡ ಘಟನೆಯನ್ನು ಉಲ್ಲೇಖಿಸಿ ಕನ್ನಡ ಹಾಡುಗಳ ಹಾಡಿ ಎಂಬ ಬೇಡಿಕೆಯನ್ನು ಜೋಡಿಸುವ ಮೂಲಕ ಪ್ರತಿಕ್ರಿಯಿಸಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read