ಬೆಂಗಳೂರು : PGCET-2025 ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸುವ ಕೊನೆ ದಿನಾಂಕವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಅಂದರೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ.
ಮೇ 14 ಬೆಳಿಗ್ಗೆ 11ರೊಳಗೆ ಅರ್ಜಿ ಸಲ್ಲಿಸಬೇಕು. ಅಂದೇ ಸಂಜೆ 6ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ಪ್ರಕಟಣೆ ಹೊರಡಿಸಿದೆ.

