BREAKING : ಕೊಡಗಿನಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮ

ಕೊಡಗು : ಕೊಡಗಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮರಾಗಿದ್ದಾರೆ. ರಜೆ ನಿಮಿತ್ತ ಮನೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮಾಯಾಮುಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿವಾಹ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುವಾಗ ಯೋಧ ಬಿಪಿನ್ ಭೀಮಯ್ಯ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಿಪಿನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read