HomeLatest NewsGOOD NEWS: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

GOOD NEWS: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

  ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ WWW.schooleducation.karnataka.gov.in ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.

 ಹುದ್ದೆಗಳ ವಿವರ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು,

ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರೌಢ), ತಾಂತ್ರಿಕ ಸಹಾಯಕರು(ಪ್ರೌಢ)

  ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.

  ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular