ಬೆಂಗಳೂರು: ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ: 01-04-2025 ರಿಂದ ದಿನಾಂಕ: 30-06-2025ರ ವರೆಗಿನ ಅವಧಿಗೆ ವಾರ್ಷಿಕ ಶೇ 7.1ಕ್ಕೆ ನಿಗದಿಪಡಿಸಲಾಗಿದೆ ಎಂದು ಆರ್ಥಿಕ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.
