ಬೆಂಗಳೂರು : ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳ ಬಗ್ಗೆ ಉಲ್ಲೇಖ (1) ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ.
ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಉಲ್ಲೇಖ (2) ರಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದರಿ ಸಭೆಯ ನಡವಳಿಯಂತೆ ಈ ಕೆಳಕಂಡಂತೆ ಕ್ರಮ ವಹಿಸಲು ತಿಳಿಸಿದೆ.
- ಕಂದಾಯ ಇಲಾಖೆಯ ತಂತ್ರಾಂಶದ ಮೂಲಕ ತಹಶೀಲ್ದಾರರಿಂದ ಸ್ವೀಕರಿಸಲಾದ ಹಕ್ಕು ಪತ್ರಗಳಲ್ಲಿ ತಪ್ಪಾದ/ಅಪೂರ್ಣ (ವಿಸ್ತೀರ್ಣ, ಚಕ್ಕುಬಂಧಿ ಇತ್ಯಾದಿ) ಮಾಹಿತಿಯಿದ್ದಲ್ಲಿ ಅಂತಹ ಹಕ್ಕು ಪತ್ರಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ PID ತಯಾರಿಸಿದೆ ಇ-ಸ್ವತ್ತು ತಂತ್ರಾಂಶದಲ್ಲಿ ತಿರಸ್ಕರಿಸುವುದು ಎಂದು ತಿಳಿಸಿದೆ.



