HomeLatest NewsJOB ALERT : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

JOB ALERT : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ WWW.schooleducation.karnataka.gov.in ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ವಿವರ: ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು,
ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ)
ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular