ಬೆಂಗಳೂರು : ಬೆಂಗಳೂರಿನಲ್ಲಿ ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಕೊಲೆಯಾಗಿದೆ.
ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ಅಜೀಜ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ.
ವೀರಮಣಿ, ಪವನ್, ಅಜೀಜ್ ಎಂಬುವವರು ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಒಂದು ದಿನ ಮೂವರು ಪಾರ್ಟಿ ಮಾಡುವಾಗ ಅಜೀಜ್ ಹಾಗೂ ಪವನ್ ನಡುವೆ ಗಲಾಟೆ ನಡೆದಿದೆ. ನಂತರ ಅಜೀಜ್ ಮೇಲೆ ವೀರಮಣಿ ಹಾಗೂ ಪವನ್ ಹಲ್ಲೆ ನಡೆಸಿದ್ದಾರೆ. ನಂತರ ಅಪಘಾತವಾಗಿದೆ ಎಂದು ಅಜೀಜ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಆರೋಪಿಗಳು. ಆದರೆ ಚಿಕಿತ್ಸೆ ಫಲಿಸದೇ ಅಜೀಜ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಂತರ ಮಾಹಿತಿ ಕಲೆಹಾಕಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
You Might Also Like
TAGGED:ಸ್ನೇಹಿತನ ಕೊಲೆ