BIG NEWS: ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡುವ ಚೀನಾ ಯತ್ನಕ್ಕೆ ಖಡಕ್ ತಿರುಗೇಟು ನೀಡಿದ ಭಾರತ

ನವದೆಹಲಿ: ಅರುಣಾಚಲ ಪ್ರದೇಶದ ಕೆಲ ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಲು ಮುಂದಾದ ಪ್ರಯತ್ನಕ್ಕೆ ಭಾರತ ಖಡಕ್ ತಿರುಗೇಟು ನೀಡಿದೆ.

ಚೀನಾ ಪ್ರಯತ್ನವನ್ನು ತಿರಸ್ಕರಿಸಿರುವ ಭಾರತ, ಅರುಣಾಚಲ ಪ್ರದೇಶ ಯಾವತ್ತೂ ಭಾರತದ ಅವಿಭಾಜ್ಯ ಅಂಗ. ಚೀನಾ ವ್ಯರ್ಥ ಪ್ರಯತ್ನಕ್ಕೆ ಮುಂದಾದರೆ ಸುಮ್ಮನಿರಲ್ಲ ಎಂದು ತಕ್ಕ ಉತ್ತರ ನೀಡಿದೆ.

ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಚೀನಾ ಯತ್ನಗಳು ನಮ್ಮ ಗಮನಕ್ಕೆ ಬಂದಿವೆ. ಅರುಣಾಚಲ ಪ್ರದೇಶ ಭಾರತದ ರಾಜ್ಯ. ಚೀನಾದ ನಿಷ್ಪ್ರಯೋಜಕ, ಅಸಂಬದ್ಧ, ಅವಿವೇಕತನದ ಪ್ರಯತ್ನಗಳು ಸಫಲವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶ ಎಂದಿಗೂ ಭಾರತದ ಅವಿಭಾಜ್ಯ ಹಾಗೂ ಬೇರ್ಪಡಿಸಲಗದ ಭಾಗವಾಗಿದೆ. ವಾಸ್ತವವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read