ಬಳ್ಳಾರಿ : 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಈಗಾಗಲೇ ಖರೀದಿಸಲಾಗುತ್ತಿದ್ದು, ಖರೀದಿಯ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಅಥವಾ ಆಯಾ ತಾಲ್ಲೂಕಿನ ತಹಶೀಲ್ದಾರರು, ಕೃಷಿ ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಜೋಳ ಖರೀದಿ