ಬೆಂಗಳೂರು : ಇಂದಿನಿಂದ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ನಾಲ್ಕು ದಿನಗಳು ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. #WeatherAlert pic.twitter.com/IddsdA6o9g
— DIPR Karnataka (@KarnatakaVarthe) May 14, 2025