HomeLatest Newsಕೇಂದ್ರ ಪುರಸ್ಕೃತ ಯೋಜನೆಗಳ ಬಾಕಿ ಅನುದಾನ ಬಿಡುಗಡೆಗೆ ಸಿಎಂ ಸಿದ್ಧರಾಮಯ್ಯ ಆಗ್ರಹ

ಕೇಂದ್ರ ಪುರಸ್ಕೃತ ಯೋಜನೆಗಳ ಬಾಕಿ ಅನುದಾನ ಬಿಡುಗಡೆಗೆ ಸಿಎಂ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು 4,195 ಕೋಟಿ ರೂ. ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಬಾಕಿ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಬುಧವಾರ ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46,859 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ 22,758 ಕೋಟಿ ರೂ.ಗಳಿದ್ದು ಕೇಂದ್ರದಿಂದ 18,561 ಕೋಟಿ ರೂ. ಮಾತ್ರ ಬಿಡುಗಡೆ ಆಗಿದೆ. 4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ಪತ್ರ ಬರೆದಿದ್ದೇವೆ ಎಂದು ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular