HomeKarnatakaBIG NEWS : ಇನ್ಮುಂದೆ ರಾಜ್ಯ ಸರ್ಕಾರದಿಂದಲೇ '108 ಆ್ಯಂಬುಲೆನ್ಸ್' ಗಳ ನಿರ್ವಹಣೆ : ಸಚಿವ...

BIG NEWS : ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ‘108 ಆ್ಯಂಬುಲೆನ್ಸ್’ ಗಳ ನಿರ್ವಹಣೆ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು : 108 ಅಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗು ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

08 ಅಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗು ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಅಂಬ್ಯುಲೆನ್ಸ್’ಗಳು ಸರ್ಕಾರದ್ದೇ ಆದರೂ ನಿರ್ವಹಣೆ ಮಾತ್ರ ಖಾಸಗಿಯವರದ್ದಾಗಿತ್ತು. ವಾಹನಗಳ ಡಿಸೇಲ್ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಚಾಲಕರ ವೇತನವನ್ನು ಸರ್ಕಾರ ಬಿಡುಗಡೆಗೊಳಿಸಿದರೂ ಏಜೆನ್ಸಿಗಳು ಸಕಾಲಕ್ಕೆ ಪಾವತಿ ಮಾಡುತ್ತಿರಲಿಲ್ಲ. ಏಜೆನ್ಸಿಗಳು ವೇತನ ಬಿಡುಗಡೆಗೊಳಿಸಲು ಪ್ರತಿ ಬಾರಿ ಸರ್ಕಾರ ಮಧ್ಯೆ ಪ್ರವೇಶಿಸಬೇಕಾಗಿತ್ತು. ಖಾಸಗಿ ನಿರ್ವಹಣೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವೇ ಆಗುತ್ತಿತ್ತು. ಆದರಿಂದ ಸರ್ಕಾರ ಈ ಐತಿಹಾಸಿಕ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಸಾಫ್ಟ್ವೇರ್ ಸಿದ್ಧಪಡಿಸಲಾಗಿದ್ದು ಚಾಮರಾಜನಗರದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಮುಂಬರುವ ತಿಂಗಳುಗಳಲ್ಲಿ ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆಗಳನ್ನು ಆರೋಗ್ಯ ಇಲಾಖೆಯ ನಿರ್ವಹಣಾ ವ್ಯಾಪ್ತಿಗೆ ತರಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular