BREAKING: ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಭಾವನೆ ತಲಾ 2 ಸಾವಿರ ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.

ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ.

ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ₹12,000 ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ ₹14,000 ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read