ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಪ್ರತಿ ವರ್ಷ 30 ಸಾವಿರ ರೂ. ವಿದ್ಯಾರ್ಥಿ ವೇತನ ಘೋಷಿಸಿದ ಅಜೀಂ ಪ್ರೇಮ್ ಜಿ ಫೌಂಡೇಶನ್

ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಹೆಣ್ಣುಮಕ್ಕಳನ್ನು ಉತ್ತೇಜಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ 2025- 26 ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಗೆ ಪ್ರವೇಶ ಪಡೆಯುವ 2.5 ಲಕ್ಷ ವಿದ್ಯಾರ್ಥಿನಿಯರಿಗೆ ವ್ಯಾಸಂಗದ ಅವಧಿಯಲ್ಲಿ ಪ್ರತಿವರ್ಷ ತಲಾ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ.

ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಅನುರಾಗ್ ಬೆಹರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ಸರ್ಕಾರಿ ಶಾಲೆಗಳಲ್ಲಿ 10 ಮತ್ತು 12ನೇ ತರಗತಿ ಓದಿ ಉತ್ತೀರ್ಣರಾಗಿ ಪ್ರಸ್ತುತ ಸರ್ಕಾರಿ/ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶ ಪಡೆದ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 25 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. 2024- 25 ನೇ ಸಾಲಿನಲ್ಲಿ 25 ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read