ಬೆಂಗಳೂರು: ಉತ್ತರ ಒಳನಾಡಿನ ಮಧ್ಯ ಭಾಗದಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಮೇ 15 ರಂದು ಗುರುವಾರ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ ಮಳೆಯಾಗಿದೆ. ಪ್ರಮುಖವಾಗಿ ದಾವಣಗೆರೆ ಜಿಲ್ಲೆ ಜಗಳೂರು, ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ತಲಾ 11 ಸೆಂ. ಮೀ.ನಷ್ಟು ಮಳೆಯಾಗಿದೆ. ಚಾಮರಾಜನಗರ ಜಿಲ್ಲೆ ಬೇಗೂರಿನಲ್ಲಿ 6 ಸೆಂ.ಮೀ., ಚಿಕ್ಕಬಳ್ಳಾಪುರ ಜಿಲ್ಲೆ ಚಿತ್ತಾಪುರದಲ್ಲಿ 5 ಸೆಂ.ಮೀ. ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ.
ಶುಕ್ರವಾರ ಕೂಡ ಭಾರಿ ಮಳೆ ಸಾಧ್ಯತೆ ಇದ್ದು, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಕೋಲಾರ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.